![]()
ಲೋಕಸಭಾ ಚುನವಣೆ-2024 ಕ್ಕೆ ಸಂಬಂಧಿಸಿದಂತೆ ಜಿಲ್ಲಾ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಉಪನ್ಯಾಸಕರು ಮತ್ತು ಶಿಕ್ಷಕರನ್ನು ಚುನಾವಣೆ ಕಾರ್ಯಗಳಿಗೆ ನಿಯೋಜನೆ ಮಾಡಿಕೊಳ್ಳಲಾಗುತ್ತಿದ್ದು ಈ ಬಗ್ಗೆ ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಸಿಂಡಿಕೇಟ್ ಸದಸ್ಯರಾಗಿರುವ ಹರೀಶ್ ಆಚಾರ್ಯ ಸೇರಿದಂತೆ ಹಲವರು ಆಕ್ಷೇಪವನ್ನು ವ್ಯಕ್ತಪಡಿಸಿ ಶೈಕ್ಷಣಿಕ ಕಾರ್ಯಗಳಿಗೆ ಆದ್ಯತೆ ನೀಡಿ ಶಿಕ್ಷಕರನ್ನು ಚುನಾವಣಾ ಕಾರ್ಯಕ್ಕೆ ಬಳಸುವಂತೆ ಮನವಿ ಸಲ್ಲಿಸಿದ್ದರು.
ಪ್ರಸ್ತುತ ದ್ವಿತೀಯ ಪಿ.ಯು.ಸಿ ಪರೀಕ್ಷೆಗಳು ಪ್ರಾರಂಭವಾಗಿದ್ದು ಇನ್ನೇನು ಅಂತಿಮವಾಗಲಿದ್ದು ಇದರ ಹಿಂದೆಯೇ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಪ್ರಾರಂಭವಾಗುತ್ತದೆ. ನಂತರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವನ್ನು ತ್ವರಿತವಾಗಿ ಅಂತಿಮಗೊಳಿಸಿ ಫಲಿತಾಂಶ ಪ್ರಕಟಿಸಬೇಕಾಗಿರುವುದರಿಂದ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ಮೌಲ್ಯಮಾಪನ ಕಾರ್ಯಕ್ಕೆ ನಿಯೋಜನೆಗೊಂಡಿರುವ ಪ್ರಾಂಶುಪಾಲರು/ಉಪನ್ಯಾಸಕರು/ಶಿಕ್ಷಕರನ್ನು ಮೌಲ್ಯಮಾಪನ ಕಾರ್ಯ ಮುಗಿಯುವವರೆಗೂ ಚುನಾವಣಾ ಕಾರ್ಯದಿಂದ ವಿನಾಯಿತಿ ನೀಡಿ ತದನಂತರ ಚುನಾವಣಾ ಕಾರ್ಯಕ್ಕೆ ನಿಯೋಜಿಸಿಕೊಳ್ಳುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳಲ್ಲಿ ಕೋರಿರುತ್ತಾರೆ.