
ವಿಶ್ವದ ಅತ್ಯಂತ ದೊಡ್ಡ ಪ್ರಜಾಸತ್ತಾತ್ಮಕ ದೇಶದ ಲೋಕಸಭಾ ಚುನಾವಣೆಯನ್ನು ಅತ್ಯಂತ ಯಶಸ್ವಿಯಾಗಿ ನಡೆಸುವ ನಿಟ್ಟಿನಲ್ಲಿ ಜಿಲ್ಲಾಡಳಿತದೊಂದಿಗೆ ಕೈಜೋಡಿಸಿ ಕಾರ್ಯನಿರ್ವಹಿಸುವುದು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯವಾಗಿದೆ. ಚುನಾವಣಾ ಕರ್ತವ್ಯವನ್ನು ನಿರ್ವಹಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತದೊಂದಿಗೆ ಪ್ರತಿಯೊಬ್ಬ ಸಿಬ್ಬಂದಿಯ ಸಹಕಾರವೂ ಅತ್ಯಗತ್ಯವಾಗಿದೆ. ಆದರೆ ಚುನಾವಣಾ ಕಾರ್ಯ ನಿರ್ವಹಣೆಗೆ ಶಿಕ್ಷಕರನ್ನು ನಿಯೋಜಿಸುವ ಸಂದರ್ಭದಲ್ಲಿ ಚುನಾವಣಾ ಆಯೋಗವು ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ಚಟುವಟಿಕೆಗಳು, ಪರೀಕ್ಷಾ ಕಾರ್ಯ, ಶಿಕ್ಷಕರ ವಯೋನಿವೃತ್ತಿ, ಅನಾರೋಗ್ಯ ಇನ್ನಿತರ ಅಗತ್ಯ ಅಂಶಗಳನ್ನು ಆಧರಿಸಿಕೊಂಡು ನಿಯೋಜಿಸಬೇಕೆಂದು ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಸಿಂಡಿಕೇಟ್ ಸದಸ್ಯರಾದ ಡಾ||ಎಸ್ ಆರ್ ಹರೀಶ್ ಆಚಾರ್ಯ ಅವರು ಚುನಾವಣಾಧಿಕಾರಿಗಳಿಗೆ ಮನವಿಯನ್ನು ಮಾಡಿದ್ದಾರೆ.